ಬೆಂಗಳೂರು: ಇತ್ತೇಚೆಗಷ್ಟೇ ರಾಜ್ಯ ಸರ್ಕಾರ ಹಾಲು ಮೊಸರು ಬೆಲೆ ಏರಿಕೆಯ ಮಾಡುವ ಮೂಲಕ ಸಾರ್ವಜನಿಕರ ಟೀಕೆಗಳಿಗೆ ಗುರಿಯಾಗಿತ್ತು. ಈ ಮತ್ತೆ ಜನರ ಜೇಬಿಗೆ ಕತ್ತರಿ ಬೀಳುವ ಶಾಕ್ ನೀಡಲು ರಾಜ್ಯ ಸರ್ಕಾರ ಸಿದ್ಧವಾಗಿದೆ. ಸರ್ಕಾರಿ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ನವೆಂಬರ್ 5ರಿಂದಲೇ ಜಾರಿಗೆ ಬರುವಂತೆ ಹೆಚ್ಚಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ನ.4ರಂದು ಸಭೆ; ನ5ರಿಂದಲೇ ಜಾರಿ! ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾರಿಗೆ ಸಚಿವ ಬೈರತಿ ಸುರೇಶ್, ಸಾರಿಗೆ ಟಿಕೆಟ್ ದರ ಏರಿಕೆ ಎಲ್ಲೆಲ್ಲೆಇ ಎಷ್ಟೆಷ್ಟು ಎಂಬುದು ನವೆಂಬರ್ 4ರಂದು ನಿಗದಿಯಾಗಿರುವ ಸಾರಿಗೆ ಇಲಾಖೆ ಹಾಗೂ ನಾಲ್ಕೂ ನಿಗಮಗಳ ಹಿರಿಯ ಅಧಿಕಾರಿಗಳ ಮಹತ್ವದ ಸಭೆಯಲ್ಲಿ ನಿರ್ಧಾರವಾಗಲಿದೆ. ಈ ಸಭೆಯಲ್ಲಿ ದರ ಏರಿಕೆಯ ಅಂತಿಮ ರೂಪುರೇಷೆ ಪ್ರಕಟವಾಗಲಿದ್ದು, ನವೆಂಬರ್ 5ರಿಂದಲೇ ಪರಿಷ್ಕೃತ ದರಗಳು ಜಾರಿಗೆ ಬರಲಿವೆ ಎಂದಿದ್ದಾರೆ.
ದೇಶದಲ್ಲಿ ಕಳೆದೊಂದು ವರ್ಷದ ಅವಧಿಯಲ್ಲಿ ಐದು ಬಾರಿ ಡೀಸೆಲ್ ಬೆಲೆ ಹೆಚ್ಚಿಸಲಾಗಿದೆ. ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳು ವಾರ್ಷಿಕವಾಗಿ ಸುಮಾರು 2 ಸಾವಿರ ಕೋಟಿ ರೂ. ನಷ್ಟ ಅನುಭವಿಸುತ್ತಿವೆ. ಇಂತಹ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಬಸ್ ಟಿಕೆಟ್ ದರ ಏರಿಕೆ ಮಾಡುವುದು ಅನಿವಾರ್ಯವಾಗಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಮ್ಮ ಿಂಗಿತವನ್ನು ವ್ಯಕ್ತಪಡಿಸಿದ್ದಾರೆ.