LIVE TV StateNationalEntertainmentSportsHealth
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಹುಳಿಯಾರಿನಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ

ಪಾದಚಾರಿಗಳ ಸುಗಮ ಸಂಚಾರಕ್ಕೆ ಸ್ಥಳೀಯ ಆಡಳಿತ ಕ್ರಮ; ತೆರವುಗೊಂಡ ಜಾಗದಲ್ಲಿ ಮತ್ತೆ ಒತ್ತುವರಿಯಾಗದಂತೆ ನಿಗಾ ವಹಿಸಲು ಸಾರ್ವಜನಿಕರ ಆಗ್ರಹ

ಹುಳಿಯಾರು: ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪಾದಚಾರಿಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿರುವ ಫುಟ್‌ಪಾತ್ ಒತ್ತುವರಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಹುಳಿಯಾರು ಪಟ್ಟಣ ಪಂಚಾಯಿತಿ ಆರಂಭಿಸಿದೆ.

ಪಟ್ಟಣದ ಬಾಲಾಜಿ ಚಿತ್ರಮಂದಿರದ ಪಕ್ಕದಿಂದ ತಿಪಟೂರು ರಸ್ತೆವರೆಗೆ ಹಾಗೂ ಯೂಸುಫ್ ಖಾನ್ ಪೆಟ್ರೋಲ್ ಬಂಕ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಸ್ತೆ ಮತ್ತು ಫುಟ್‌ಪಾತ್‌ಗಳನ್ನು ಅತಿಕ್ರಮಿಸಿ ಅಳವಡಿಸಲಾಗಿದ್ದ ಅಂಗಡಿಗಳ ನಾಮಫಲಕಗಳು, ಜಾಹೀರಾತು ಬೋರ್ಡ್‌ಗಳು ಹಾಗೂ ವ್ಯಾಪಾರ ಸಾಮಗ್ರಿಗಳನ್ನು ಜೆಸಿಬಿ ಯಂತ್ರದ ಮೂಲಕ ತೆರವುಗೊಳಿಸಲಾಯಿತು.

ಪಟ್ಟಣದ ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ಫುಟ್‌ಪಾತ್‌ಗಳನ್ನೇ ವ್ಯಾಪಾರ ವಹಿವಾಟಿಗೆ ಬಳಸಿಕೊಳ್ಳಲಾಗುತ್ತಿತ್ತು. ಅಂಗಡಿಗಳ ಮುಂಭಾಗದಲ್ಲಿ ನಾಮಫಲಕ, ಜಾಹೀರಾತು ಫಲಕ ಹಾಗೂ ವಿವಿಧ ವಸ್ತುಗಳನ್ನು ಇರಿಸಿದ್ದರಿಂದ ಪಾದಚಾರಿಗಳು ಫುಟ್‌ಪಾತ್‌ನಲ್ಲಿ ಸಂಚರಿಸಲು ಸಾಧ್ಯವಾಗದೆ ವಾಹನಗಳು ಓಡಾಡುವ ರಸ್ತೆಯಲ್ಲಿಯೇ ಜೀವಭಯದ ನಡುವೆ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ಸ್ಥಳೀಯ ಆಡಳಿತ ಒತ್ತುವರಿ ತೆರವಿಗೆ ಮುಂದಾಗಿದೆ.

ಮಂಗಳವಾರ ರಾಮಗೋಪಾಲ್ ಸರ್ಕಲ್ ಬಳಿಯ ಆಟೋ ನಿಲ್ದಾಣದಿಂದ ಎಪಿಎಂಸಿ ವರೆಗೆ ಹಾಗೂ ಅಲ್ಲಿಂದ ಗಾಂಧಿ ಪೇಟೆಯವರೆಗೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಯಲಿದೆ. ತದನಂತರದ ದಿನಗಳಲ್ಲಿ ಬಸ್ ನಿಲ್ದಾಣ, ಎಂ.ಎಸ್.ಆರ್. ಅಂಗಡಿ ರಸ್ತೆ, ಶಿಲ್ಪಾ ಸ್ಟೋರ್ ವರೆಗಿನ ರಸ್ತೆ ಹಾಗೂ ರಾಜಕುಮಾರ್ ರಸ್ತೆಯಲ್ಲಿಯೂ ಕಾರ್ಯಾಚರಣೆ ನಡೆಸಲಾಗುವುದು. ರಸ್ತೆಗೆ ಅಡ್ಡಲಾಗಿ ಅಳವಡಿಸಿದ್ದ ಹಲವು ಜಾಹೀರಾತು ಫಲಕಗಳನ್ನು ಈಗಾಗಲೇ ತೆರವುಗೊಳಿಸಲಾಗಿದೆ. ಫುಟ್‌ಪಾತ್ ಮೇಲೆ ದ್ವಿಚಕ್ರ ವಾಹನಗಳನ್ನು ನಿಲ್ಲಿಸುತ್ತಿದ್ದ ವಾಹನ ಶೋರೂಮ್‌ಗಳಿಗೂ ನೋಟಿಸ್ ನೀಡಿ ಅತಿಕ್ರಮಣ ತೆರವುಗೊಳಿಸಲಾಗಿದೆ.

ಬಸ್ ನಿಲ್ದಾಣದ ಸಮೀಪ ಕೆರೆ ಅಂಗಳವನ್ನು ಒತ್ತುವರಿ ಮಾಡಿಕೊಂಡಿರುವವರು ಸ್ವಯಂಪ್ರೇರಿತವಾಗಿ ತೆರವುಗೊಳಿಸಿದರೆ ಒಳ್ಳೆಯದು. ಈಗಾಗಲೇ ಈ ಸಂಬಂಧದ ಲೋಕಾಯುಕ್ತ ಪ್ರಕರಣದಲ್ಲಿ ವ್ಯತಿರಿಕ್ತ ತೀರ್ಪು ಬಂದಿದ್ದು, ಸಂಬಂಧಪಟ್ಟ ಒತ್ತುವರಿಗಳನ್ನು ಕಡ್ಡಾಯವಾಗಿ ತೆರವುಗೊಳಿಸಬೇಕಿದೆ ಎಂದು ಮುಖ್ಯಾಧಿಕಾರಿ ಮಂಜುನಾಥ್ ಎಚ್ಚರಿಕೆ ನೀಡಿದ್ದಾರೆ.

ಆಡಳಿತಾಧಿಕಾರಿಗಳೂ ಆಗಿರುವ ತಹಶೀಲ್ದಾರ್ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಈ ಕಾರ್ಯಾಚರಣೆಯಲ್ಲಿ ಪೊಲೀಸ್ ಇಲಾಖೆ, ಬೆಸ್ಕಾಂ ಹಾಗೂ ಪಟ್ಟಣ ಪಂಚಾಯಿತಿ ಸಿಬ್ಬಂದಿ ಸಹಕರಿಸುತ್ತಿದ್ದಾರೆ. ಒಟ್ಟಾರೆ, ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ಬಸ್ ನಿಲ್ದಾಣದ ಕೆರೆ ಅಂಗಳ ಸೇರಿದಂತೆ ಎಲ್ಲ ಸಾರ್ವಜನಿಕ ಸ್ಥಳಗಳ ಒತ್ತುವರಿಗಳನ್ನೂ ತೆರವುಗೊಳಿಸಿ ಪಾದಚಾರಿಗಳು ಹಾಗೂ ವಾಹನ ಸವಾರರಿಗೆ ಸುಗಮ ಸಂಚಾರದ ವ್ಯವಸ್ಥೆ ಕಲ್ಪಿಸಬೇಕಿದೆ ಎಂಬುದು ಪಟ್ಟಣದ ನಾಗರಿಕರ ಒತ್ತಾಯವಾಗಿದೆ.

Author
ವಾಜಿದ್ ಖಾನ್
ಕಳೆದ 30 ವರ್ಷಗಳಿಂದ ಪತ್ರಿಕಾ ರಂಗದಲ್ಲಿ ಸೇವೆ ಸಲ್ಲಿಸುತ್ತಿರುವ ಇವರು, ತಮ್ಮ ತೀಕ್ಷ್ಣ ಬರವಣಿಗೆ ಮೂಲಕ ಜನಮನ್ನಣೆ ಗಳಿಸಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗೆ ಇವರಿಗೆ ತುಮಕೂರು ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಜೊತೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕೊಡಮಾಡುವ ಮನವಿಯ ಮೌಲ್ಯ ವಿಭಾಗದ ಹೆಚ್ಆರ್ ಗುಂಡೂರಾವ್ ಸ್ಮಾರಕ ಪ್ರಶಸ್ತಿಗೆ ಇವರು ಭಾಜನರಾಗಿದ್ದಾರೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಾದ್ಯಂತ ಬ್ಯಾಂಕ್‌ಗೆ ಬೀಗಜಡಿಯುವ ಎಚ್ಚರಿಕೆ12ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ. ಶಿವತಾರಕ್ ಆಯ್ಕೆದೇವರ ದರ್ಶನಕ್ಕೆ ತೆರಳಿ ಮರಳುವಾಗ ದುರಂತ; ತಂದೆ-ಮಗ ಸಾವು!ಕಾವ್ಯ ಕಮ್ಮಟಕ್ಕೆ ವಿದ್ಯಾರ್ಥಿಗಳಿಗೆ ಆಹ್ವಾನ; ಕವನ ರಚನೆಗೆ ಸಿಗಲಿದೆ ತರಬೇತಿಹುಳಿಯಾರಿನಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆಶಿಕ್ಷಣಕ್ಕಾಗಿ ಜಮೀನು, ಬಿಸಿಯೂಟಕ್ಕೆ ನೀರು ದಾನ ಮಾಡಿದ್ದ ಮಹಾತಾಯಿ ʼಶ್ರೀದೇವಿʼ ಅಪಘಾತದಲ್ಲಿ ದುರ್ಮರಣಹಾಲು, ಮೊಸರು ಹಾಗೂ ಬಸ್ ಪ್ರಯಾಣ ದರ ಏರಿಕೆ; ತಾಜುದ್ದೀನ್ ಷರೀಫ್ ತೀವ್ರ ಖಂಡನೆರಸ್ತೆಗೆ ಅಡ್ಡಲಾಗಿ ಕಾಂಪೌಂಡ್ ನಿರ್ಮಾಣ: ಕ್ರಮಕ್ಕೆ ಒತ್ತಾಯನರಿ ದಾಳಿ: ಮಹಿಳೆಯರು ಸೇರಿ ಮೂವರಿಗೆ ಗಾಯಬಸ್ ಪ್ರಯಾಣ ದರ ಏರಿಕೆ?: ನವಂಬರ್ 5ರಿಂದಲೇ ಜಾರಿ!